ಗೋಣಿಕೊಪ್ಪ ವರದಿ , ಫೆ. 9: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಗೋಣಿಕೊಪ್ಪ ಪ್ರಗತಿಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಕೈಕೇರಿ ಭಗವತಿ ದೇವಸ್ಥಾನದಲ್ಲಿ ನಡೆಯಿತು.
ಡಾ. ಚಂದ್ರಶೇಖರ್ ತಂಡದಿಂದ ಧಾರ್ಮಿಕ ಉಪನ್ಯಾಸ ನಡೆಯಿತು. ವಿಶೇಷ ಆಹ್ವಾನಿತರುಗಳಾಗಿ ಕೈಕೇರಿ ಭಗವತಿ ದೇವಸ್ಥಾನ ಅಧ್ಯಕ್ಷ ಕುಪ್ಪಂಡ ಮುತ್ತಣ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸದಾಶಿವಗೌಡ, ತಾ.ಪಂ. ಸದಸ್ಯ ಜಯ ಪೂವಯ್ಯ, ಹಾತೂರು ಗ್ರಾ.ಪಂ. ಉಪಾಧ್ಯಕ್ಷ ಕುಪ್ಪಂಡ ಗಿರೀಶ್ ಪೂವಣ್ಣ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪ್ರಮೋದ್ ಗಣಪತಿ, ಹಿರಿಯ ವೈದ್ಯ ಡಾ. ಕಾಳಿಮಾಡ ಶಿವಪ್ಪ ಉಪಸ್ಥಿತರಿದ್ದರು.