ಮಡಿಕೇರಿ, ಫೆ. 9 : ಪಕ್ಷದ ಬಲವರ್ಧನೆಯ ದೃಷ್ಟಿಯಿಂದ ಜಾತ್ಯತೀತ ಜನತಾದಳದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ತಾ. 11 ರಂದು ಕೂಡಿಗೆಯಲ್ಲಿ ನಡೆಸಲಾಗುವದೆಂದು ಪಕ್ಷದ ವಕ್ತಾರ ಕಾಂತರಾಜ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಿಗೆಯಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಶಾಸಕ ಹೆಚ್.ಡಿ. ರೇವಣ್ಣ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ. ತಾ.10 ರಂದು (ಇಂದು) ಮಡಿಕೆÉೀರಿಯಲ್ಲಿ ನಡೆಯುವ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ, ಅದನ್ನು ಆಯೋಜಿಸಿರುವವರ ವೈಯಕ್ತಿಕ ಲಾಭಕ್ಕಾಗಿ ನಡೆಯುತ್ತಿದೆಯೇ ಹೊರತು ಪಕ್ಷದ ಅಧಿಕೃತ ಕಾರ್ಯಕ್ರಮವಲ್ಲವೆಂದರು.