ಮಡಿಕೇರಿ, ಫೆ. 9 : ಕೊಯನಾಡು ಜೈ ಹಿಂದ್ ಯುವಕ ಮಂಡಲ ಹಾಗೂ ಕೊಡಗು ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಷನ್‍ನ ಸಂಯುಕ್ತಾಶ್ರಯದಲ್ಲಿ ಅಂತರರಾಜ್ಯ ಮಟ್ಟದ ಪುರಷರ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ತಾ. 10 ರಂದು (ಇಂದು) ಕೊಯನಾಡಿನ ಶಾಲಾ ಮೈದಾನದಲ್ಲಿ ನಡೆಯಲಿದೆ.

ಮಧ್ಯಾಹ್ನ 3 ಗಂಟೆಗೆ ಪಂದ್ಯಾವಳಿ ಆರಂಭಗೊಳ್ಳಲಿದ್ದು, ಕೊಯನಾಡಿನ ಮಾಡಶ್ಯೇರಿ ಬಿಲ್ಡರ್ಸ್ ಮತ್ತು ಡವಲಪರ್ಸ್‍ನ ನಸೀರ್ ಮಾಡಶ್ಯೇರಿ ಅವರು ಟ್ರೋಫಿ ಅನಾವರಣಗೊಳಿಸಲಿದ್ದಾರೆ ಹಾಗೂ ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರ ಕಳಗಿ ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ.

ಕೊಯನಾಡು ಜೈ ಹಿಂದ್ ಯುವಕ ಮಂಡಲದ ಅಧ್ಯಕ್ಷ ಕೆ.ಎಸ್. ರಾಘವೇಂದ್ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕರ್ನಾಟಕ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್‍ನ ಅಧ್ಯಕ್ಷ ರಾಕೇಶ್ ಮಲ್ಲಿ ಕ್ರೀಡಾಂಗಣ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಐಎನ್‍ಟಿಯುಸಿ ಘಟಕದ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಮುಖಂಡ ಹರೀಶ್ ಬೋಪಣ್ಣ, ಅಮೆಚೂರು ಕಬ್ಬಡ್ಡಿ ಅಸೋಸಿಯೇಷನ್‍ನ ಅಧ್ಯಕ್ಷ ಹೆಚ್.ಎಸ್. ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಕಲ್ ರಮಾನಾಥ್, ಜೈ ಹಿಂದ್ ಯುವಕ ಮಂಡಲ ಸಂಚಾಲಕ ಎಸ್.ಪಿ. ಹನೀಫ್, ಜೈಹಿಂದ್ ಯುವಕ ಮಂಡಲದ ಮಾಜಿ ಅಧ್ಯಕ್ಷ ಎಸ್.ಇ. ಮಹಮ್ಮದ್ ಕುಂಞ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ವಕ್ಫ್ ಸಮಿತಿಯ ಸದಸ್ಯ ಎಸ್. ಮೊಹಿದೀನ್ ಕುಂಞ, ಪಯಸ್ವಿನಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‍ನ ನಿರ್ದೇಶಕ ತೀರ್ಥಪ್ರಸಾದ್, ಸಂಪಾಜೆ ಗ್ರಾ.ಪಂ. ಉಪಾಧ್ಯಕ್ಷ ಬಿ.ಆರ್.ಸುಂದರ್, ಗ್ರಾ.ಪಂ. ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಪ್ರಥಮ ಬಹುಮಾನ ರೂ. 55,555 ನಗದು ಮತ್ತು ಫಲಕ, ದ್ವಿತೀಯ ರೂ. 33,333 ಮತ್ತು ಫಲಕ, ತೃತೀಯ ರೂ. 11,111 ನಗದು ಮತ್ತು ಫಲಕ, ಹಾಗೂ ನಾಲ್ಕನೇ ಬಹುಮಾನ ಫಲಕ ಹಾಗೂ ವೈಯಕ್ತಿಕ ಬಹುಮಾನ ನೀಡಲಾಗುವದು ಎಂದು ಕ್ರೀಡಾ ಸಮಿತಿಯ ಪ್ರಮುಖ ಹನೀಫ್ ಸಂಪಾಜೆ ತಿಳಿಸಿದ್ದಾರೆ.