ಪಾಲಿಬೆಟ್ಟ, ಫೆ. 9: ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2017-18ನೇ ಸಾಲಿನ ದ್ವೀತಿಯ ಪಿ.ಯು.ಸಿ. ಅಂತಿಮ ಪರೀಕ್ಷಾ ಸಿದ್ಧತೆಯ ಬಗ್ಗೆ ಉಚಿತ ತರಬೇತಿಯನ್ನು ತಾ. 12 ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನೀಡಲಾಗುವದೆಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ. ಎಂ. ಭವಾನಿ ತಿಳಿಸಿದ್ದಾರೆ.
ಸ್ಥಳೀಯ ಕಾಲೇಜುಗಳ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು, ಪೂರಕ ಪರೀಕ್ಷೆ ಹಾಗೂ ಖಾಸಗಿಯಾಗಿ ಪರೀಕ್ಷೆಯನ್ನು ಬರೆಯುವ ಅಭ್ಯರ್ಥಿಗಳು ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9482193807, 08274-251010 ಸಂಪರ್ಕಿಸಬಹುದು.