ಮಡಿಕೇರಿ, ಫೆ. 10: ಕೊಡಗು ಪ್ರೆಸ್ ಕ್ಲಬ್‍ನ 19ನೇ ವಾರ್ಷಿಕೋತ್ಸವ ಸಂಭ್ರಮದಿಂದ ಜರುಗಿತು. ಇಲ್ಲಿನ ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬ ವರ್ಗ ಹಾಗೂ ಮಕ್ಕಳಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಪುಟಾಣಿಗಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಸ್ಪರ್ಧೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಇದೇ ಸಂದರ್ಭ ಪತ್ರಕರ್ತರಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.