ಸೋಮವಾರಪೇಟೆ,ಫೆ.12: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಹಾಗೂ ತಾಲೂಕು ಯುವ ಒಕ್ಕೂಟದ ವತಿಯಿಂದ ನೀಡಲಾಗುವ ಯುವ ಪ್ರಶಸ್ತಿಗೆ ಸೋಮವಾರಪೇಟೆಯ ತೋಳೂರುಶೆಟ್ಟಳ್ಳಿ ಗ್ರಾಮದ ಅಶ್ವಿನಿ ಕೃಷ್ಣಕಾಂತ್ ಭಾಜನರಾಗಿದ್ದಾರೆ. ಅಶ್ವಿನಿ ಕೃಷ್ಣಕಾಂತ್ ಯುವತಿ ಮಂಡಳಿಗಳಲ್ಲಿ ಸಕ್ರಿಯರಾಗಿದ್ದು, ತೋಳೂರುಶೆಟ್ಟಳ್ಳಿಯ ಕಾವೇರಿ ಮಾತಾ ಯುವತಿ ಮಂಡಳಿಯ ಸದಸ್ಯೆಯಾಗಿದ್ದಾರೆ.