ಚೆಟ್ಟಳ್ಳಿ, ಫೆ. 11: ಪ್ರತಿಷ್ಠಿತ ಸಂಸ್ಥೆಯಾದ ಕೆ.ಕೆ.ಎಫ್.ಸಿ. ಫುಟ್ಬಾಲ್ ಪಂದ್ಯಾಟಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ಚಾಲನೆ ನೀಡಿದರು. ಸಂಸ್ಥೆಯ ಅಧ್ಯಕ್ಷ ಗ್ರಾಮ ಪಂಚಾಯಿತಿ ಸದಸ್ಯ ಮೊಹಮ್ಮದ್ ರಫಿ ಅಧ್ಯಕ್ಷತೆ ವಹಿಸಿದ್ದರು.

ಧ್ವಜಾರೋಹಣವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವತ್ಸಲ ನೆರವೇರಿಸಿದರು. ಚೆಟ್ಟಳ್ಳಿ ಪ್ರೌಢಶಾಲಾ ದೈಹಿಕ ಶಿಕ್ಷಕ ಮಾಚಯ್ಯ, ಸಂಘದ ಸಲಹೆಗಾರ ಶಶಿಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಹ್ಮದ್ ಶಹಬ್, ದಾನಿಗಳಾದ ಮಂಜುನಾಥ್, ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.