ಮಡಿಕೇರಿ, ಫೆ.12: ಜಿಲ್ಲೆಯಲ್ಲಿ ಯಾವ ಯಾವ ಕುಟುಂಬಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿಲ್ಲ. ಅಂತಹ ಮನೆಗಳನ್ನು ಗುರುತಿಸಿ ‘ಸೌಭಾಗ್ಯ’ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮವಹಿಸುವಂತೆ ತಾ.ಪಂ.ಇಒ ಹಾಗೂ ಸೆಸ್ಕ್ ಎಂಜಿನಿಯರ್‍ಗಳಿಗೆ ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇನ್ನೂ 9 ಸಾವಿರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಆದ್ದರಿಂದ ಒಂದು ತಿಂಗಳಲ್ಲಿ ವಿದ್ಯುತ್ ಇಲ್ಲದ ಕುಟುಂಬಗಳ ಪಟ್ಟಿ ತಯಾರಿಸಿ ವಿದ್ಯುತ್ ಸಂಪರ್ಕ ಜನರು ಸಾಕಷ್ಟು ಸಂಖ್ಯೆಯಲ್ಲಿದ್ದು, ಅರಣ್ಯದಲ್ಲಿ ವಾಸಮಾಡುತ್ತಿದ್ದಾರೆ. ಇವರಿಗೆ ಇನ್ನೂ ಸಹ ವಿದ್ಯುತ್ ಸಂಪರ್ಕ, ಕುಡಿಯುವ ನೀರು ವಸತಿ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಾಧ್ಯವಾಗಿಲ್ಲ. ಇಂತಹ ಹಾಡಿಗಳನ್ನು ಗುರುತಿಸಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗ ಬೇಕಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ವಚ್ಚ ಭಾರತ್ ಮೀಷನ್‍ರಡಿ ಶೌಚಾಲಯ ಇಲ್ಲದ ಕುಟುಂಬಳಿಗೆ ಹೊಸ ಶೌಚಾಲಯ ನಿರ್ಮಿಸಿ ಕೊಡಬೇಕು.

(ಮೊದಲ ಪುಟದಿಂದ) ಪರಿಸರ ಶುಚಿತ್ವಕ್ಕೆ ಸಂಬಂಧಿಸಿದಂತೆ ಹೆಚ್ಚಿನ ನಿಗಾ ವಹಿಬೇಕಿದೆ. ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ, ಕಸ ಹಾಕಬೇಕಿದೆ ಎಂದು ಪ್ರತಾಪ್ ಸಿಂಹ ಸಲಹೆ ಮಾಡಿದರು.

ಶಾಸಕರಾದ ಕೆ.ಜಿ.ಬೋಪಯ್ಯ ಮಾತನಾಡಿ, ವಿರಾಜಪೇಟೆ ತಾಲೂಕಿನ ಕಾರೆಹಡ್ಲು ಚೇನಿಹಡ್ಲು ಮತ್ತಿತರ ಗಿರಿಜನ ಹಾಡಿಗಳಿಗೆ ರಸ್ತೆ, ಕುಡಿಯುವ ನೀರು ವಿದ್ಯುತ್ ಸಂಪರ್ಕ ವಸತಿ ಮತ್ತಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಮತ್ತೊಂದು ದಿಡ್ಡಳ್ಳಿ ಆಗದಂತೆ ನೋಡಿಕೊಳ್ಳುವದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಎಂದು ಎಚ್ಚರಿಕೆಯಿತ್ತರು.

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಖ್ ಯೋಜನೆ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ಕೆ.ಜಿ.ಬೋಪಯ್ಯ ದೂರಿದರು.

ಬಾಳೆಲೆ ವಿಭಾಗಲ್ಲಿ ಸಿಂಗಲ್ ಫ್ಯೂಜ್ ವಿದ್ಯುತ್ ಪೂರೈಕೆ ಆಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸುವಂತೆ ಸೆಸ್ಕ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಈ ಸಂಬಂಧ ಸಮರ್ಪಕ ವಿದ್ಯುತ್ ಪೂರೈಕೆ ಅಗತ್ಯ ಕ್ರಮಕೈಗೊಳ್ಳಲಾಗುವದು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ ಕಚೇರಿ ಮುಖ್ಯಸ್ಥರು ಕೆಳ ಹಂತದ ಅಧಿಕಾರಿಗಳು ಸಭೆ ಕಳುಹಿಸಿ ನುಣಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದು ತಪ್ಪಬೇಕು. ಈ ಸಂಬಂಧ ಸಭೆಗೆ ಆಗಮಿಸದಿರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಜೊತೆಗೆ ಇಲಾಖೆಗಳ ರಾಜ್ಯಮಟ್ಟದ ಗಮನಕ್ಕೆ ತರಬೇಕಿದೆ ಎಂದು ಅವರು ಹೇಳಿದರು.

ಸಮಿತಿ ಸದಸ್ಯರಾದ ಸುಭಾಷ್ ನಾಣಯ್ಯ ಅವರು ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ 6 ತಿಂಗಳಿಗೊಮ್ಮೆ ವಿದ್ಯುತ್ ಬಿಲ್ಲನ್ನು ನೀಡುತ್ತಾರೆ. ಇದರಿಂದ ಗ್ರಾಮೀಣ ಕುಟುಂಬಗಳು ವಿದ್ಯುತ್ ಬಿಲ್ಲು ಪಾವತಿಸಲು ತೊಂದರೆಯಾಗು ವದಿಲ್ಲವೆ ಎಂದು ಪ್ರಶ್ನಿಸಿದರು. ಇನ್ನೂ ಮುಂದಾದರು ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಪ್ರತಿ ತಿಂಗಳು ವಿದ್ಯುತ್ ಬಿಲ್ಲು ನೀಡಬೇಕು ಎಂದು ಅವರು ಮನವಿ ಮಾಡಿದರು.

ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಗಾಗಿ ಅನುಷ್ಠಾನ ಗೊಳಿಸಲು ಕೆಲವು ಮಾರ್ಪಾಡು ಮಾಡುವದು ಅತ್ಯಗತ್ಯವಾಗಿದೆ ಎಂದು ಸಲಹೆ ಮಾಡಿದರು.

ಸಮಿತಿ ಸದಸ್ಯರಾದ ಕುಶಾಲಪ್ಪ ಅವರು ಶನಿವಾರ ಸಂತೆಯ ಸರ್ಕಾರಿ ಆಸ್ಪತ್ರೆ ಬಳಿ ಕಸವನ್ನು ಹಾಕುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಸಾಂಕ್ರಾಮಿಕ ರೋಗಗಳು ಉಂಟಾಗುತ್ತಿದೆ. ಆದ್ದರಿಂದ ಕಸ ವಿಲೇವಾರಿಗೆ ಪ್ರತ್ಯೇಕ ಸ್ಥಳ ಗುರುತಿಸಬೇಕಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೊಟ್ಟ ಕೆಲಸವನ್ನು ಅಧಿಕಾರಿಗಳು ತಪ್ಪದೇ ನಿರ್ವಹಿಸ ಬೇಕು ಇಲ್ಲಿದಿದ್ದರೆ ಜನಪ್ರತಿನಿಧಿಗಳಿಗೆ ದೂರು ಬರುತ್ತದೆ. ಆದ್ದರಿಂದ ದೂರು ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಪ್ರತಾಪ್ ಸಿಂಹ ಅವರ ಹೇಳಿದರು.

ಸಮಿತಿ ಸದ್ಯಸರಾದ ಮನುಮುತ್ತಪ್ಪ ಮಾತನಾಡಿ ಕೊಡಗು ಪ್ರವಾಸಿ ಕೇಂದ್ರವಾದ ನಂತರ ಎಲ್ಲೆಂದರಲ್ಲಿ ಕಸ ಎಸೆಯಲ್ಪಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ ಮತ್ತು ಶುಚಿತ್ವ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಸಮಿತಿ ಸದಸ್ಯರಾದ ಡಾ|| ನವೀನ್, ವಿಜಯ, ದೇವರಾಜು, ಸುಮಂತ್ ಇತರರು ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದರು.

ಐ.ಟಿಡಿ.ಪಿ ಇಲಾಖೆ ಅಧಿಕಾರಿ ಪ್ರಕಾಶ್ ಅವರು ಇಲಾಖಾ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಈ.ಪಂ. ಯೋಜನಾ ನಿರ್ದೆಶಕರು ಸಿದ್ದಲಿಂಗ ಮೂರ್ತಿ, ಅರಣ್ಯ ಸೆಸ್ಕ್, ಇತರ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖಾ ಕಾರ್ಯಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು.