ಕುಶಾಲನಗರ, ಫೆ 12: ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇತನ ತಾರತಮ್ಯ ಬಗೆಹರಿಯದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಮತ್ತು ಉಪನ್ಯಾಸಕರಗಳ ಸಂಘ ಜಂಟಿಯಾಗಿ ತಾ.13 ರಂದು (ಇಂದು) ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಕೊಡಗು ಜಿಲ್ಲಾ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಹಂಡ್ರಂಗಿ ನಾಗರಾಜು ಮಾಹಿತಿ ನೀಡಿ ತಾ. 13 ರಂದು ಬೆಳಿಗ್ಗೆ 10 ಗಂಟೆಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಮುಂದೆ ಜಿಲ್ಲೆಯ ಎಲ್ಲಾ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.