ಮಡಿಕೇರಿ, ಫೆ. 11: ಪ್ರಸಕ್ತ 2018 ಸಾಲಿನ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ತಾ. 21 ರವರೆಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವೆಬ್ಸೈಟ್ ತಿತಿತಿ.sಣsಞiಟಟಞಚಿಡಿ.iಟಿ ನಲ್ಲಿ ವಿವರಗಳನ್ನು ನೋಂದಾಯಿಸಬಹುದಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1ನೇ ಮಹಡಿ, ಲೋಟಸ್ ಟವರ್, ರೇಸ್ ಕೋರ್ಸ್ ರಸ್ತೆ ಬೆಂಗಳೂರು, (ದೂ.ಸಂ. 9972494764), ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ (08274-261261), ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ (08272-223552), ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ (08276-281115) ಅಥವಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ (08272-229983) ಸಂಪರ್ಕಿಸಬಹುದು.