ಗೋಣಿಕೊಪ್ಪಲು, ಫೆ. 11: ಇತ್ತೀಚೆಗೆ ಗೋಣಿಕೊಪ್ಪಲು ಕಾವೇರಿ ಕಾಲೇಜು ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಸಾಕ್ಷಾತ್ಕಾರ 2ಞ18’ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಫೆಸ್ಟ್ನಲ್ಲಿ ಮೈಸೂರು ಮಾನಸ ಗಂಗೋತ್ರಿ ಸ್ನಾತಕೋತ್ತರ ಕೇಂದ್ರ ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡುವದರ ಮೂಲಕ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ಚಾಂಪಿಯನ್ ಪಟ್ಟ ಅಲಂಕರಿಸಿತು.
ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬೆಸ್ಟ್ ಮ್ಯಾನೇಜರ್ ಪ್ರಶಸ್ತಿಯನ್ನು ಮೈಸೂರು ವಿ.ವಿ.ಯ ಶ್ವೇತಾ ತಮ್ಮದಾಗಿಸಿಕೊಂಡರು.
ರಾಜ್ಯದ 14 ಸ್ನಾತಕೋತ್ತರ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅನೀಶ್ ಮಾದಪ್ಪ ಮಾಡಿದರು. ಬಿ.ಎನ್. ಪ್ರಕಾಶ್ ಹಾಜರಿದ್ದು ಬಹುಮಾನ ವಿತರಿಸಿದರು.
ಪ್ರಾಂಶುಪಾಲ ಪಟ್ಟಡ ಪೂವಣ್ಣ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಎಂ.ಕಾಂ. ವಿಭಾಗದ ಮುಖ್ಯಸ್ಥೆ ಡಾ. ಎಸ್.ಎನ್. ಬೀನಾ, ಉಪನ್ಯಾಸಕರಾದ ಮುದ್ದಪ್ಪ, ನಿತ್ಯ ಹಾಗೂ ವಿದ್ಯಾರ್ಥಿ ನಾಯಕಿ ಪೂವಮ್ಮ ಉಪಸ್ಥಿತರಿದ್ದರು.