ಸೋಮವಾರಪೇಟೆ, ಫೆ. 14: ಪ್ರಧಾನ ಮಂತ್ರಿ ಜನೌಷಧ್ ಯೋಜನೆಯಡಿ ಇಲ್ಲಿನ ಕರ್ನಾಟಕ ಬ್ಯಾಂಕ್ ಸಮೀಪದ ಕಟ್ಟಡದಲ್ಲಿ ತೆರೆಯಲಾಗಿರುವ ನೂತನ ಜನೌಷಧ್ ಕೇಂದ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸುವ ನಿಟ್ಟಿನಲ್ಲಿ ಜನೌಷಧ್ ಕೇಂದ್ರ ಯೋಜನೆಯನ್ನು ಜಾರಿಗೆ ತಂದಿದ್ದು, ಬಡವರ ಪರವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರೊಂದಿಗೆ ಕೇಂದ್ರ ಬಜೆಟ್‍ನಲ್ಲೂ ಪ್ರತಿ ಬಡ ಕುಟುಂಬಕ್ಕೆ ರೂ. 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆ ಅಳವಡಿಸಿದ್ದಾರೆ ಎಂದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಮನುಕುಮಾರ್ ರೈ, ನಗರಾಧ್ಯಕ್ಷ ಸೋಮೇಶ್, ಜನೌಷಧ್ ಕೇಂದ್ರದ ಶರತ್‍ಚಂದ್ರ, ಪ್ರಮುಖರಾದ ಕೊಮಾರಿ ಸತೀಶ್, ಶ್ರೀಕಾಂತ್, ಪಿ. ಮಧು, ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.