ಕುಶಾಲನಗರ, ಫೆ. 14: ತೊರೆನೂರು ಒಕ್ಕಲಿಗರ ಸಂಘದಿಂದ ಗ್ರಾಮದ ಮುಖ್ಯ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ತಂಗುದಾಣವನ್ನು ತಾ. 16 ರಂದು ಲೋಕಾರ್ಪಣೆಗೊಳಿಸಲಾಗುವದು ಎಂದು ತೊರೆನೂರು ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೆ.ಎಸ್. ಕೃಷ್ಣೇಗೌಡ ಹೇಳಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿ ಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೊರೆನೂರು ಗ್ರಾಮದಲ್ಲಿ ಬಸ್ ತಂಗುದಾಣವೊಂದನ್ನು ನಿರ್ಮಿಸಲಾಗಿದೆ. ಸಮಾಜದ 60 ಕುಟುಂಬಗಳ ಆರ್ಥಿಕ ಸಹಕಾರದಿಂದ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥವಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. 16 ರಂದು ಕಟ್ಟಡವನ್ನು ಆದಿ ಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿಗಳು ಹಾಗೂ ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿಗಳು ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ತೊರೆನೂರು ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಚಂಗಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ತೊರೆನೂರು ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ಸೋಮಶೇಖರ್ ಇದ್ದರು.