ಮಡಿಕೇರಿ, ಫೆ. 14: ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಲತಃ ಹಾತೂರು ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಮಡಿಕೇರಿಯ ಸುಬ್ರಹ್ಮಣ್ಯ ನಗರದಲ್ಲಿ ನೆಲೆಸಿದ್ದ ಸನ್ನಿಧಿ ಮೋಟಾರ್ ಡ್ರೈವಿಂಗ್ ಸ್ಕೂಲ್‍ನ ಮಾಲೀಕರಾಗಿದ್ದ ಕೊಕ್ಕಂಡ ದಿನೇಶ್ (ದಿನು-41) ಅವರು ನಿನ್ನೆ ದಿನ ಸಂಜೆ ಗೌಳಿಬೀದಿಯಲ್ಲಿ ವಾಲಿಬಾಲ್ ಆಡುತ್ತಿದ್ದ ಸಂದರ್ಭ ಹೃದಯಾಘಾತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಸಾಗಿಸುತ್ತಿದ್ದ ವೇಳೆ ಹುಣಸೂರು ಸಮೀಪ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಹಾತೂರಿನಲ್ಲಿ ನೆರವೇರಿತು.