ಮಡಿಕೇರಿ, ಫೆ.14 : ಸಂವಿಧಾನ ಜಾರಿ ದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ. 16 ರಂದು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಸ್ಫೂರ್ತಿ ದಿವಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಹೆಚ್.ವಿ. ದೇವದಾಸ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪ್ರಭು, ಮಹಿಳಾ ಕಾಲೇಜಿನ ಪ್ರಾಂಶುಪಾಲೆÀ ಡಾ. ಜೆನಿಫರ್ ಲೋಲಿಟ, ವ್ಯಾಂಡಮ್ ಎಂಟರ್ ಪ್ರೈಸಸ್ನ ಮಾಲೀಕ ಕೆ.ಕೆ. ದಾಮೋದರ್, ಗಾಳಿಬೀಡಿನ ಟಿ.ಆರ್. ವಾಸುದೇವ, ಮಡಿಕೇರಿಯ ಮೈಸೂರು ಸಿಲ್ಕ್ಸ್ ಎಂಪೋರಿಯಂನ ಮಾಲೀಕ ಹೆಚ್.ಎನ್. ಮೊೈದೀನ್ ಇಬ್ರಾಹಿಂ, ದಸಂಸ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಜಯ ಬ್ಯಾಂಕ್ನ ಸೀನಿಯರ್ ಮ್ಯಾನೇಜರ್ ಟಿ. ಪ್ರಸನ್ನ ಕುಮಾರ್ ವಿದ್ಯಾರ್ಥಿಗಳಿಗೆ ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ.