ಮಡಿಕೇರಿ, ಫೆ. 14 : ಮೈಸೂರು ಮಾನಸ ಗಂಗೋತ್ರಿಯ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ
ತಾ. 16 ರಿಂದ 20 ರವರೆಗೆ ‘ಶಾಸ್ತ್ರೀಯ ಕನ್ನಡ ಪಠ್ಯಗಳ ಅಧ್ಯಯನ ಶಿಬಿರ’ ಮಂಗಳೂರು ವಿಶ್ವವಿದ್ಯಾನಿಲಯದ ಚಿಕ್ಕಅಳುವಾರದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ. ಕೆ.ಆರ್. ದುರ್ಗಾದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಿಬಿರವನ್ನು ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಡಿ.ಕೆ. ರಾಜೇಂದ್ರ ಅವರು ಉದ್ಘಾಟಿಸಲಿದ್ದಾರೆ. ಮಂಗಳೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ತಾಳ್ತಜೆ ವಸಂತಕುಮಾರ್ ಆಶಯ ನುಡಿಗಳನ್ನಾಡಲಿದ್ದು, ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ನಿರ್ದೇಶಕÀ ಡಾ.ಪಿ.ಎಲ್. ಧರ್ಮ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಐದು ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ಕೃಷ್ಣಮೂರ್ತಿ ಹನೂರು, ಪ್ರೊ. ಎಂ.ಜಿ. ಮಂಜುನಾಥ, ಪ್ರೊ. ಎನ್. ಎಂ. ತಳವಾರ, ಪ್ರೊ. ಜ್ಯೋತಿಶಂಕರ್, ಪ್ರೊ. ಸಬಲಂ ಭೋಜಣ್ಣ ರೆಡ್ಡಿ, ಪ್ರೊ. ವರದರಾಜ ಚಂದ್ರಗಿರಿ, ಡಾ. ಆರ್. ಚಲಪತಿ, ಪ್ರೊ. ಪ್ರಕಾಶ್, ಪ್ರೊ. ಎನ್.ಎಸ್. ತಾರಾನಾಥ್, ಪ್ರೊ. ಜಿ. ಆರ್. ತಿಪ್ಪೇಸ್ವಾಮಿ, ಪ್ರೊ. ಆರ್. ರಾಮಕೃಷ್ಣ, ಪ್ರೊ. ಸೋಮಣ್ಣ, ಪ್ರೊ. ಅಭಯ್ ಕುಮಾರ್, ಡಾ. ಟಿ.ಕೆ. ಕೆಂಪೇಗೌಡ, ಪ್ರೊ. ಚಂದ್ರಕಲಾ ಎಚ್.ಆರ್., ಪ್ರೊ. ಜ್ಞಾನೇಶ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ತಾ. 20 ರಂದು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದ್ದು, ಚಿಕ್ಕಅಳುವಾರದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ.ತಾಳ್ತಜೆ ವಸಂತಕುಮಾರ್ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಹಿರಿಯ ವಕೀಲರು ಹಾಗೂ ಖ್ಯಾತ ಸಾಹಿತಿಗಳಾದ ಬಾಲಸುಬ್ರಮಣ್ಯ ಕಂಜರ್ಪಣೆ, ಕುಶಾಲನಗರದ ಐಎನ್‍ಟಿಯುಸಿಯ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಹಳೆಗನ್ನಡ ಸಾಹಿತ್ಯದ ಬಗ್ಗೆ ವಿಸ್ತøತವಾದ ಮಾಹಿತಿಯನ್ನು ನೀಡುವ ನಿಟ್ಟಿನ ಶಿಬಿರದಲ್ಲಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು, ಪದವಿ ಪೂರ್ವ ಮತ್ತು ಪದವಿ ಕಾಲೆÉೀಜು ಉಪನ್ಯಾಸಕರು, ಕನ್ನಡವನ್ನು ಐಚ್ಛಿಕ ವಿಷಯವನ್ನಾಗಿಸಿಕೊಂಡು ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಪಾಲ್ಗೊಳ್ಳುವ ಇವರೆಲ್ಲರಿಗೂ ಮೈಸೂರಿನ ಮಾನಸಗಂಗೋತ್ರಿಯ ಭಾರತೀಯ ಭಾಷಾ ಸಂಸ್ಥಾನದಿಂದ ಪ್ರಶಂಸಾ ಪತ್ರವನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಶಿಬಿರದಲ್ಲಿ ಆಸಕ್ತರು ಯಾರು ಬೇಕಾದರು ಪಾಲ್ಗೊಳ್ಳಲು ಅವಕಾಶವನ್ನು ಒದಗಿಸಲಾಗಿದೆ. ಶಿಬಿರದ ಅವಧಿಯಲ್ಲಿ ಪ್ರತಿನಿತ್ಯ 4 ತರಗತಿಗಳನ್ನು ಸಂಪನ್ಮೂಲ ವ್ಯಕ್ತಿಗಳು ನಡೆಸಲಿದ್ದಾರೆ ಎಂದು ಲೋಕೇಶ್ ಸಾಗರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಪ್ರಮುಖರಾದ ಫಿಲಿಪ್ ವಾಸ್, ಅಶ್ವತ್ಥ್ ಹಾಗೂ ನಾಗರಾಜಶೆಟ್ಟಿ ಪಾಲ್ಗೊಂಡಿದ್ದರು.