ಮಡಿಕೇರಿ, ಫೆ. 24: ಜಿಲ್ಲೆಯಲ್ಲಿ ಅರಣ್ಯ ಹಕ್ಕುಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಬೇಗ ಇತ್ಯರ್ಥ ಮಾಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗಾಳಿಬೀಡಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಒಂದು ವಾರದೊಳಗೆ ಅರಣ್ಯಧಿಕಾರಿಗಳಿಗೆ ಕಳುಹಿಸಿಕೊಡಿ. ಹಾಗೆಯೇ ಅರಣ್ಯ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವ ಬಗ್ಗೆ ವೈಯಕ್ತಿಕವಾಗಿ ಕೊಡಲು ಬರುವುದಿಲ.್ಲ ಸರ್ಕಾರದ ಆದೇಶವನ್ನು ಪಾಲನೆ ಮಾಡಬೇಕು ಎಂದು ಅವರು ತಿಳಿಸಿದರು.

ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ, ಸಮುದಾಯ ಭವನಗಳ ಆಯ್ಕೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಫಾರಂ ಎ ನಲ್ಲಿ ಅರ್ಜಿ ಸಲ್ಲಿಸಬೇಕು. ಹಾಗೆಯೇ ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾಡಿನಂಚಿನಲ್ಲಿ 8 ಕುಟುಂಬಗಳು ವಾಸ ಮಾಡುತ್ತಿದ್ದು, ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಒದಗಿಸಬೇಕಿದೆ ಎಂದು ತಿಳಿಸಿದರು.

ಐ.ಟಿ.ಡಿ.ಪಿ. ಇಲಾಖೆಯ ಪ್ರಕಾಶ್, ತಹಶೀಲ್ದಾರ್ ಕುಸುಮ, ಜಿ.ಪಂ. ಸದಸ್ಯ ಕೆ.ಕೆ. ಕುಮಾರ, ಜಿ.ಪಂ. ಸದಸ್ಯರಾದ ಮಂಜುಳ, ಪಂಕಜ ಇತರರು ಇದ್ದರು.