ಕೂಡಿಗೆ, ಫೆ. 24: ಹೆಬ್ಬಾಲೆ ಗ್ರಾಮ ಪಂಚಾಯಿತಿಯ 2017-18ನೇ ಸಾಲಿನ ಗ್ರಾಮಸಭೆ ಮಾ. 2 ರಂದು ಬೆಳಿಗ್ಗೆ 11 ಗಂಟೆಗೆ ಹೆಬ್ಬಾಲೆ ಸಂತೆ ಮಾರುಕಟ್ಟೆ ಆವರಣದಲ್ಲಿ ನಡೆಯಲಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎನ್. ಲತಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ಗ್ರಾಮಸಭೆಗೆ ಹೆಬ್ಬಾಲೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀನಿವಾಸ್, ತಾಲೂಕು ಪಂಚಾಯಿತಿ ಸದಸ್ಯರಾದ ಜಯಣ್ಣ, ಸಬಿತ ಹಾಗೂ ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎನ್. ಹೇಮಂತ್ ಕುಮಾರ್ ಆಗಮಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ತಿಳಿಸಿದ್ದಾರೆ.