ಸಿದ್ದಾಪುರ, ಫೆ. 25: ಕುಶಾಲನಗರ ಅರಣ್ಯ ವ್ಯಾಪ್ತಿಗೆ ಒಳಪಡುವ ಮಾಲ್ದಾರೆಯ ಗದ್ದಿಗೆ ಬೆಟ್ಟದ ಸಮೀಪದ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹರಡಿ ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ ಪಿರಿಯಾಪಟ್ಟಣದಿಂದ ಅಗ್ನಿಶಾಮಕ ದಳದ ವಾಹನಗಳನ್ನು ಕರೆಸಿ ಬೆಂಕಿಯನ್ನು ನಂದಿಸಲಾಯಿತು.