ಮಡಿಕೇರಿ, ಫೆ. 25 : ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಅವರು ತಾ. 26 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಸಚಿವರು ಇಂದು ನಗರದಲ್ಲಿ ನಡೆಯುವ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ, ನಂತರ ವೀರಾಜಪೇಟೆಯಲ್ಲಿ ನಡೆಯುವ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.