ಮಡಿಕೇರಿ, ಫೆ. 25: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‍ಗೆ ತಾ. 27 ರಂದು ರೋಟರಿ ಜಿಲ್ಲಾ ಗವರ್ನರ್ ಮಾತಂಡ ಸುರೇಶ್ ಚಂಗಪ್ಪ ಅಧಿಕೃತ ಭೇಟಿ ನೀಡುತ್ತಿದ್ದು, ಈ ಸಂದರ್ಭ ಮೂವರು ಸಾಧಕರನ್ನು ಸನ್ಮಾನಿಸಲಾಗುತ್ತದೆ.

ಅಂದು ಸಂಜೆ 7 ಗಂಟೆಗೆ ಮಡಿಕೇರಿ ರೋಟರಿ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಮಡಿಕೇರಿಯಲ್ಲಿ ಹಲವಾರು ವರ್ಷಗಳಿಂದ ಸಂಗೀತ ಶಿಕ್ಷಕಿಯಾಗಿದ್ದ ವಿದೂಷಿ ವಿನಯಾ ಕೃಷ್ಣಮೂರ್ತಿ ಅವರನ್ನು ಸಾಂಸ್ಕøತಿಕ ರಂಗದ ಸಾಧನೆಗಾಗಿ, ಅರಣ್ಯ ರಕ್ಷಣಾ ಸೇವೆಗಾಗಿ ಉಪ ವಲಯ ಅರಣ್ಯಾಧಿಕಾರಿ ಕಳ್ಳೀರ ದೇವಯ್ಯ, ಸಮಾಜಸೇವೆಗಾಗಿ ಜೋಡುಪಾಲದ ಸತ್ಯನಾರಾಯಣ ಭಟ್ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದು ಮಿಸ್ಟಿ ಹಿಲ್ಸ್ ಅದ್ಯಕ್ಷ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯಾನವನ ನಿರ್ವಹಣೆ

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿಯಲ್ಲಿರುವ ಮಡಿಕೇರಿ ನಗರಸಭೆಗೆ ಸೇರಿದ ಉದ್ಯಾನ ನಿರ್ವಹಣೆಗಾಗಿ ತಾ. 27 ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಿಸ್ಟಿ ಹಿಲ್ಸ್ ಪಡೆದುಕೊಳ್ಳುತ್ತಿದೆ.

ಉದ್ಯಾನವನದಲ್ಲಿ ಆಸನ ವ್ಯವಸ್ಥೆ ಸೇರಿದಂತೆ ಹಲವಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಅದೇ ದಿನ ರೋಟರಿ ಜಿಲ್ಲಾ ರಾಜ್ಯಪಾಲರು ಮಡಿಕೇರಿಯ ವಿವಿಧ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ ಎಂದು ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಪಿ.ಎಂ. ಸಂದೀಪ್ ತಿಳಿಸಿದ್ದಾರೆ.