ಮಡಿಕೇರಿ, ಫೆ. 26 : ಪ್ರಸ್ತಕ 2018ನೇ ಸಾಲಿನ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಅರ್ಹ ಪರಿಶಿಷ್ಟ ಪಂಗಡದ ಯುವಕ ಯುವತಿಯ ರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವೆಬ್‍ಸೈಟ್ ತಿತಿತಿ.sಣsಞiಟಟಞಚಿಡಿ.iಟಿ ನಲ್ಲಿ ವಿವರಗಳನ್ನು ತಾ. 28ರೊಳಗೆ ನೋಂದಾಯಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1ನೇ ಮಹಡಿ, ಲೋಟಸ್ ಟವರ್, ರೆಸ್ ಕೋರ್ಸ್ ರಸ್ತೆ ಬೆಂಗಳೂರು, (ದೂ.ಸಂ.9972494764), ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ (08274-261261), ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ (08272-223552), ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ (08276-281115) ಅಥವಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ(08272-229983) ಸಂಪರ್ಕಿಸಬಹುದು.