ನಾಪೆÉÇೀಕ್ಲು: ಜೆಡಿಎಸ್ ಪಕ್ಷ ಜಾತಿ ವಾದವನ್ನು ಬಿಟ್ಟು ಜಾತ್ಯತೀತ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ಶ್ರಮಿಸುತ್ತಿದೆ; ಇದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆಡಳಿತ ವೈಖರಿಯೇ ಸಾಕ್ಷಿ; ರಾಜ್ಯದಲ್ಲಿ ಗ್ರಾಮೀಣ ಅಭಿವೃದ್ಧಿಯಾಗಬೇಕಾದರೆ ಜೆಡಿಎಸ್ ಪಕ್ಷದ ಆಡಳಿತದಿಂದ ಮಾತ್ರ ಸಾಧ್ಯ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎಂ. ರಷೀದ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 27 ರಂದು ಕುಶಾಲನಗರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಸಭೆ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್, ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಯ್ಯದ್ ಮುಹೀದ್ ಅಲ್ತಾಫ್, ಜೆಡಿಎಸ್ ರಾಷ್ಟ್ರ ಉಪಾಧ್ಯಕ್ಷ ಪಿ.ಜಿ.ಆರ್. ಸಿಂದ್ಯ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್. ವಿಶ್ವನಾಥ್, ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಉಸ್ತುವಾರಿ ಜಿ.ಟಿ. ದೇವೇಗೌಡ, ಕ್ರಿಶ್ಚನ್ ವಿಂಗ್ ರಾಜ್ಯಾಧ್ಯಕ್ಷ ವಿಲ್ಸನ್ ರೆಡ್ಡಿ, ಮಾಜಿ ಸಚಿವ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಬಿ.ಎ. ಜೀವಿಜಯ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ವೀರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ, ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ಇದ್ದರು.