ಸೋಮವಾರಪೇಟೆ, ಫೆ.26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಮಾ.2 ರಂದು ಬೆಳಿಗ್ಗೆ 10ಗಂಟೆಗೆ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. 18 ರಿಂದ 35 ಮತ್ತು 35 ರಿಂದ 60 ವರ್ಷದವರಿಗೆ ಪ್ರತ್ಯೇಕ ವಿಭಾಗದಲ್ಲಿ ವಿಷದ ಚೆಂಡು, ಸಂಗೀತ ಕುರ್ಚಿ, ಭಾರದ ಗುಂಡು ಎಸೆತ, ಬಸ್ಸು ಹುಡುಕಾಟ, ನಿಧಾನ ನಡಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.