ಸೋಮವಾರಪೇಟೆ, ಫೆ. 26 : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಶಿಕ್ಷಣದ ಮಹತ್ವ ಕುರಿತು ಕೊಡಗು ಜಿಲ್ಲಾ ವಿದ್ಯಾವರ್ಧಕ ಕಲಾವೇದಿಕೆ ವತಿಯಿಂದ ಜನ ಜಾಗೃತಿ ಬೀದಿ ನಾಟಕ ನಡೆಯಿತು.
ನಾಟಕಕ್ಕೆ ಕಾರ್ಮಿಕ ಇಲಾಖೆಯ ಮಹದೇವಸ್ವಾಮಿ ಚಾಲನೆ ನೀಡಿದರು. ನಂತರ ಮಾತನಾಡಿ, ಬಾಲ ಕಾರ್ಮಿಕರನ್ನು ಯಾವದೇ ಕೆಲಸಗಳಿಗೆ ಬಳಸಿಕೊಳ್ಳುವದು ಕಾನೂನು ಬಾಹಿರವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕಾಗಿರುವದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ. ಬಾಲಕಾರ್ಮಿಕರು ಕೆಲಸ ಮಾಡುವದು ಕಂಡುಬಂದಲ್ಲಿ ಸಾರ್ವಜನಿಕರು ಇಲಾಖೆಯ ಗಮನಕ್ಕೆ ತಂದಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವದಾಗಿ ತಿಳಿಸಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯಾಧಿಕಾರಿ ಉದಯಕುಮಾರ್, ಕಲಾವೇದಿಕೆಯ ಈ. ರಾಜು, ಆರ್. ಶಿರಾಜ್ ಅಹಮ್ಮದ್, ಚಂದ್ರಪ್ಪ, ಶಿವಕುಮಾರ್, ದೇವರಾಜ್, ಪ್ರಸನ್ನ, ನೀಲಾ, ಗೌರಮ್ಮ ಮತ್ತಿತರರು ಉಪಸ್ಥಿತರಿದ್ದರು.