ಮಡಿಕೇರಿ, ಫೆ. 26 : ಕರ್ನಾಟಕ ರಾಜ್ಯ ಅರಣ್ಯ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ “ಬೆಳಕಿನ ಭಾಗ್ಯ”ದ ಮೂಲಕ ಸಂಪಾಜೆ ಗ್ರಾ.ಪಂ. ವ್ಯಾಪ್ತಿಯ 95 ಫಲಾನುಭವಿಗಳಿಗೆ ಸೋಲಾರ್ ಲ್ಯಾಂಪ್ ವಿತರಿಸಲಾಯಿತು.

ಸಂಪಾಜೆ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮದೆ, ಕರಿಕೆ ಮತ್ತು ಚೆಂಬು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜನಪ್ರತಿನಿಧಿಗಳು, ತಾ. ಪಂ ಸದಸ್ಯರು, ಗ್ರಾಮಸ್ಥರು, ಕಾಂಗ್ರೆಸ್ ವಲಯ ಅಧ್ಯಕ್ಷರುಗಳು, ಮುಖಂಡರು ಹಾಜರಿದ್ದರು.