ನಾಪೆÉÇೀಕ್ಲು, ಫೆ. 26: ನಾಪೆÉÇೀಕ್ಲು ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಮಸ್ಯೆ ಎದುರಿಸು ವಂತಾಗಿದೆ. ಆದುದರಿಂದ ಕೂಡಲೇ ಈ ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವದು ಎಂದು ನಾಪೆÇೀಕ್ಲು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಎಚ್ಚರಿಸಿದ್ದಾರೆ. ಈ ಬಗ್ಗೆ ಪತ್ರಿಕೆಗೆ ಹೇಳಿಕೆ ನೀಡಿರುವ ಅವರು ಶಾಲಾ-ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದು, ವಿದ್ಯುತ್ ಸಮಸ್ಯೆಯ ಕಾರಣ ಅವರಿಗೆ ಓದಲು ತೊಂದರೆಯಾಗಿದೆ. ಈ ಬಗ್ಗೆ ಮೇಲಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಎಲ್ಲಾ ಸಮಯದಲ್ಲು ವಿದ್ಯುತ್ ಪೂರೈಕೆಯಾಗುತ್ತಿದ್ದು, ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಂಬಂಧಿಸಿ ದವರು ಕೂಡಲೇ ವಿದ್ಯುತ್ ಪೂರೈಕೆಗೆ ಕ್ರಮಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದ್ದಾರೆ.