ನಾಪೆÇೀಕ್ಲು, ಜ. 26: ಜೆಡಿಎಸ್ ಪಕ್ಷ ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಭರವಸೆ ನೀಡಿದರು. ನಾಪೆÇೀಕ್ಲು ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಸ್ಥಳೀಯ ಡೆಕ್ಕನ್ ಯೂತ್ ಕ್ಲಬ್‍ವತಿಯಿಂದ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆ ಮತ್ತು ಕ್ರೀಡಾ ಪಟುಗಳಿಗೆ ಮೂಲಭೂತ ಸೌಲಭ್ಯದ ಕೊರತೆಯಿದೆ. ಕ್ರೀಡಾ ಪ್ರಾಧಿಕಾರ ನಿಷ್ಕ್ರೀಯವಾಗಿದೆ ಎಂದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಕ್ರೀಡೆಗೆ ಮತ್ತು ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯ ನೀಡುವದರೊಂದಿಗೆ ಕ್ರೀಡಾ ಪ್ರಾಧಿಕಾರವನ್ನು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುವದು. ಜಿಲ್ಲೆಯಲ್ಲಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವಂತಹ ಕ್ರೀಡಾ ಪಟುಗಳಿದ್ದು, ಅವರನ್ನು ಪ್ರೋತ್ಸಾಹಿಸುವ ಕಾರ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು ಸರಕಾರ ಮಾಡಬೇಕಾದ ಕೆಲಸವನ್ನು ಸ್ಥಳೀಯ ಯೂತ್ ಕ್ಲಬ್‍ಗಳು ಮಾಡುತ್ತಿರುವದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡೆಕ್ಕನ್ ಯೂತ್ ಕ್ಲಬ್‍ನ ಅಧ್ಯಕ್ಷ ಮತ್ತು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ವಹಿಸಿದ್ದರು. ವೇದಿಕೆಯಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಾಶಿರ್, ಮಡಿಕೇರಿ ತಾಲೂಕು ಅಧ್ಯಕ್ಷ ಮುಸ್ತಾಫ, ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಂ. ರಶೀದ್, ಅಬೂಬಕ್ಕರ್, ಸುಲೈಮಾನ್, ಶಿನಾನ್ ಇದ್ದರು. ಇಸ್ಮಾಯಿಲ್ ಪ್ರೆಂಡ್ಸ್ ತಂಡ (ಮಂಗಳೂರು) ಪ್ರಥಮ ಸ್ಥಾನ ಪಡೆದು ಟ್ರೋಫಿ ಮತ್ತು ನಗದು ಬಹುಮಾನ ಪಡೆದರೆ, ಇಮ್ರಾನ್ ಪ್ರೆಂಡ್ಸ್ (ಮೂಡಬಿದಿರೆ) ದ್ವಿತೀಯ ಬಹುಮಾನ ಮತ್ತು ಖುರೈಶಿ ಪ್ರೆಂಡ್ಸ್ ತಂಡ ತೃತೀಯ ಬಹುಮಾನ ಪಡೆಯಿತು.ಸಿದ್ದಾಪುರ: ಹೊಸಪಟ್ಟಣದ ಸಮುದಾಯ ಭವನದಲ್ಲಿ ನಡೆದ ನೆಲ್ಲಿಹುದಿಕೇರಿ, ವಾಲ್ನೂರು, ನಂಜರಾಯಪಟ್ಟಣ, ಚೆಟ್ಟಳ್ಳಿ, ಗುಡ್ಡೆಹೊಸೂರು, ಕಂಬಿಬಾಣೆ, ಹೊಸಕೋಟೆ ಗ್ರಾಮಗಳ ಸ್ಥಾನೀಯ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು.

ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ಯಾವದೇ ಅಭಿವೃದ್ಧಿ ಆಗಿಲ್ಲ. ಈ ಹಿನ್ನೆಲೆ ರಾಜ್ಯದ ಜನರು ಪ್ರಾದೇಶಿಕ ಪಕ್ಷ ಜೆ.ಡಿಎಸ್.ನತ್ತ ಒಲವು ತೋರಿದ್ದಾರೆ ಎಂದು ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜೀವಿಜಯ ಹೇಳಿದರು.

ಜೆ.ಡಿ.ಎಸ್. ಪರಿಶಿಷ್ಟ ಜಾತಿ, ಪಂಗಡದ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಮಾತನಾಡಿ, ರಾಜ್ಯದಲ್ಲಿ 20 ತಿಂಗಳ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಡವರಿಗೆ ಹಕ್ಕುಪತ್ರ, ಲಾಟರಿ, ಸರಾಯಿ ನಿಷೇಧದಂತಹ ಉತ್ತಮ ಯೋಜನೆಗಳನ್ನು ಬಡವರಿಗೆ ನೀಡಿದ್ದಾರೆ ಎಂದರು.

ಜಿಲ್ಲಾ ಯುವ ಜೆ.ಡಿ.ಎಸ್. ಅಧ್ಯಕ್ಷ ಸಿ.ಎಲ್. ವಿಶ್ವ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್, ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಎಂ.ಬಿ. ಗಣೇಶ್ ಮಾತನಾಡಿದರು. ಇದೇ ಸಂದರ್ಭ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಪಕ್ಷ ತೊರೆದು ಹಲವಾರು ಮಂದಿ ಜೆ.ಡಿ.ಎಸ್. ಪಕ್ಷಕ್ಕೆ ಸೇರ್ಪಡೆಗೊಂಡರು. ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗದ ಘಟಕದ ಅಧ್ಯಕ್ಷ ಶಿವದಾಸ್, ಜಿ.ಪಂ. ಮಾಜಿ ಸದಸ್ಯ ಶಾಂತ್‍ಕುಮಾರ್, ಗ್ರಾ.ಪಂ. ಸದಸ್ಯರಾದ ಡೆನ್ನಿಬೋರಸ್, ತಮ್ಮಯ್ಯ, ಚಂದ್ರವತಿ, ವಿವಿಧ ಗ್ರಾಮಗಳ ಸ್ಥಾನೀಯ ಸಮಿತಿಯ ಪದಾಧಿಕಾರಿಗಳಾದ ಮುಂಡ್ರುಮನೆ ಸುಧೀಶ್, ಕೆ.ಇ. ಲಿಂಗುರಮೇಶ, ಆಲೆಕ್ಸ್, ಹರೀಶ್, ಶಿವಪ್ಪ, ತಳೂರ್‍ಚೇತನ್, ಕೊಳಂಬೆ ವಿನೋದ್, ಮಹಮ್ಮದ್ ಆಲಿ, ಯು.ಜಿ. ಭರತ್, ಮುನೀರ್, ಮುಸ್ತಫ ಇತರರು ಹಾಜರಿದ್ದರು. ಜಾಶೀರ್ ಸ್ವಾಗತಿಸಿ ವಿಶ್ವ ವಂದಿಸಿದರು.