*ಗೋಣಿಕೊಪ್ಪಲು, ಫೆ. 27: ಗ್ರಾಮ ಸಡಕ್ ಯೋಜನೆಯಡಿ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ಕೆಸುವಿನ ಕೆರೆ ಗಿರಿಜನ ಹಾಡಿಯ ಕಾಂಕ್ರೀಟ್ ರಸ್ತೆಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.

ಗ್ರಾಮ ಸಡಕ್ ಯೋಜನೆ ಹಾಗೂ ಶಾಸಕರ ಅನುದಾನದ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯಲಿದೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನಡೆದಾಡಲು ತೀವ್ರ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿಯನ್ನು ಮನಗಂಡು ಹಾಗೂ ಸ್ಥಳೀಯ ನಿವಾಸಿಗಳ ಮನವಿಗೆ ಸ್ಪಂದಿಸಿ ಕಾಂಕ್ರೀಟ್ ರಸ್ತೆಗೆ ಅನುದಾನ ನೀಡಿರುವದಾಗಿ ಶಾಸಕರು ಈ ಸಂದರ್ಭ ತಿಳಿಸಿದರು. ಮತ್ತಷ್ಟು ಅನುದಾನವನ್ನು ನೀಡುವ ಮೂಲಕ ಸಂಪೂರ್ಣ ಕಾಂಕ್ರೀಟ್ ರಸ್ತೆಯಾಗಿ ಮಾಡಲಾಗುವದು ಎಂದು ಹೇಳಿದರು.

ಈ ಸಂದರ್ಭ ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ಚೆನ್ನಯ್ಯನಕೋಟೆ ಗ್ರಾ.ಪಂ. ಅಧ್ಯಕ್ಷೆ ಗೀತಾ, ಸದಸ್ಯ ಅರುಣ್, ಬಿ.ಜೆ.ಪಿ. ಸ್ಥಾನೀಯ ಸಮಿತಿ ಅಧ್ಯಕ್ಷ ರತೀಶ್, ತಾ.ಪಂ. ಮಾಜಿ ಸದಸ್ಯ ದಿನೇಶ್, ಗುತ್ತಿಗೆದಾರ ಆರ್ಮುಗ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.