ಮಡಿಕೇರಿ, ಫೆ. 27: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಅಕಾಡೆಮಿಯ ವ್ಯಾಪ್ತಿಗೆ ಒಳಪಡುವ ಯಕ್ಷಗಾನ ಕ್ಷೇತ್ರದಲ್ಲಿ 5 ತಿಂಗಳ ಕಾಲ ಸಂಶೋಧನಾ ಅಧ್ಯಯನ ಮಾಡಿ ಪ್ರಬಂಧ ಮಂಡಿಸುವವರಿಗೆ ಫೆಲೋಶಿಪ್ ನೀಡುವ ಯೋಜನೆ ಯನ್ನು ಹಮ್ಮಿಕೊಂಡಿದೆ.

ಸಂಶೋಧನಾ ಕಾರ್ಯಕ್ಕಾಗಿ ಒಬ್ಬ ಸಂಶೋಧನಾ ಅಭ್ಯರ್ಥಿಗೆ ರೂ 90 ಸಾವಿರ ಹಾಗೂ ಮಾರ್ಗದರ್ಶಕರ ಗೌರವ ಸಂಭಾವನೆ ರೂ 10 ಸಾವಿರಗಳನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ವಯೋಮಿತಿ 45 ವರ್ಷ ಮೀರಿರಬಾರದು.

ಕಲಾ ಪ್ರ್ರಾಕಾರಗಳು: ಯಕ್ಷಗಾನದ ತೆಂಕುತಿಟ್ಟು, ಬಡಗುತಿಟ್ಟು, ಬಡಾಬಡಗುತಿಟ್ಟು, ತಾಳಮದ್ದಳೆ, ಮೂಡಲಪಾಯ, ಯಕ್ಷಗಾನ, ಬೊಂಬೆಯಾಟ, ಯಕ್ಷಗಾನ ಇತರ ಪ್ರಾಕಾರಗಳು. ಈ ವಿಷಯದ ಬಗ್ಗೆ ಆಸಕ್ತಿ ಇರುವ ಕನ್ನಡ ಭಾಷಾ ವಿಜ್ಞಾನ, ಜಾನಪದ, ಸಮಾಜ ವಿಜ್ಞಾನ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಮಹಿಳಾ ಅಧ್ಯಯನ, ಇತಿಹಾಸ, ಮಾನವಶಾಸ್ತ್ರ, ಪತ್ರಿಕೋದ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ, ಇಂಗ್ಲೀಷ್, ಹಿಂದಿ ಇತ್ಯಾದಿ ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಫೆಲೋಶಿಪ್ ಅರ್ಜಿ ನಮೂನೆಯನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.

ಆಸಕ್ತ ಅಭ್ಯರ್ಥಿ ಆಯ್ಕೆ ಮಾಡಿಕೊಳ್ಳುವ ಅಧ್ಯಯನದ ವಿಷಯದ ಬಗ್ಗೆ ನಾಲ್ಕು ಪುಟಗಳ ಸಾರಲೇಖನ ಹಾಗೂ ತಮ್ಮ ಸಾಧನೆ ಕಿರುಪರಿಚಯ ಹಾಗೂ ಜಾತಿಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಮಾರ್ಚ್ 9 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, 2 ನೇ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -02 ಇಲ್ಲಿಗೆ ಅರ್ಜಿ ಯನ್ನು ಅಂಚೆ ಮೂಲಕ ಅಥವಾ ಇ-ಮೇಲ್ (ಞಥಿbಚಿ bಚಿಟಿgಟoಡಿe @gmಚಿiಟ. ಛಿom) ಮೂಲಕ ಕಳುಹಿಸಿಕೊಡಲು ಕೋರಿದೆ.