ಮಡಿಕೇರಿ, ಫೆ. 27: ಹಿರಿಯ ವಕೀಲರು, ಮಾಜಿ ವಿಧಾನಪರಿಷತ್ ಸದಸ್ಯರಾದ ಎ.ಕೆ. ಸುಬ್ಬಯ್ಯ ಅವರ ಅಭಿನಂದನಾ ಸಮಿತಿ ವತಿಯಿಂದ ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಎ.ಕೆ. ಸುಬ್ಬಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಆರೋಗ್ಯ ಸಚಿವ ರಮೇಶ್ ಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವ ಯಂ.ಸಿ. ನಾಣಯ್ಯ ಮತ್ತಿತರರು ಇದ್ದರು.