ಮಡಿಕೇರಿ, ಫೆ. 27: ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ದೇಹದಾಢ್ರ್ಯತೆ ಮತ್ತು ದೈಹಿಕ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಿತಿಯ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಲೋಕ ಸೇವಾ ಆಯೋಗದಿಂದ ಪ್ರಸಕ್ತ ಸಾಲಿನ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2017ರ ಏಪ್ರಿಲ್ 30 ರಂದು ನಡೆದ 177 ಅಬಕಾರಿ ಉಪ ನಿರೀಕ್ಷಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಮತ್ತು ಚಾಲ್ತಿಯಲ್ಲಿರುವ ನಿಯಮಗಳನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ 1:5 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳಿಗೆ ದೇಹದಾಡÀ್ರ್ಯತೆ ಮತ್ತು ದೈಹಿಕ ಸಾಮಥ್ರ್ಯ ಪರೀಕ್ಷೆಯು ಮಾರ್ಚ್ 1 ರಂದು ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಕರ್ನಾಟಕ ಲೋಕಸೇವಾ ಆಯೋಗ ಕಳುಹಿಸುವ ಮಾನದಂಡದ ಮೇಲೆ ದೇಹದಾಡ್ರ್ಯತೆ ಮತ್ತು ದೈಹಿಕ ಸಾಮಥ್ರ್ಯ ಪರೀಕ್ಷೆ ಹಾಗೂ ವೀಡಿಯೋ ಚಿತ್ರೀಕರಣ ಮಾಡಬೇಕೆಂದು ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸದಸ್ಯರುಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಬಕಾರಿ ಉಪ ಆಯುಕ್ತೆ ಖುರ್ಷಿದ್ ಬೇಗಂ, ಅಬಕಾರಿ ನಿರೀಕ್ಷಕ ಎ.ಆರ್. ಯಶ್ವಂತ್ ಕುಮಾರ್, ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೆ. ಜಗದೀಶ್, ಅಬಕಾರಿ ಇಲಾಖೆ ಸಿಬ್ಬಂದಿ ಎಸ್. ಮಧುಸೂದನ ಇತರರು ಇದ್ದರು.