ಚೆಟ್ಟಳ್ಳಿ, ಫೆ. 27: ಶ್ರೀ ಭಗಂಡೇಶ್ವರ ತಲಕಾವೇರಿ ಕ್ಷೇತ್ರ ಗಳಲ್ಲಿ ಅಷ್ಟಮಂಗಲ ಪ್ರಶ್ನೆ ಏರ್ಪಡಿಸುವ ಸಂಬಂಧ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ , ಸದಸ್ಯರಾದ ಕೋಡಿ ಮೋಟಯ್ಯ, ಅರ್ಚಕ ರಾದ ರವಿ ಭಟ್, ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಪಾರುಪತ್ಯೇಗಾರ ಪೊನ್ನಣ್ಣ ಕ್ಷೇತ್ರದ ನೀಲೇಶ್ವರ ಪದ್ಮನಾಭ ತಂತ್ರಿಯವರನ್ನು ಭೇಟಿ ಮಾಡಿ ಚರ್ಚಿಸಿದರು.