ಮಡಿಕೇರಿ, ಫೆ. 27: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ಇಂದು ನಗರಕ್ಕೆ ಆಗಮಿಸುವದ ರೊಂದಿಗೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಪ್ರಮುಖರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.ಇಲ್ಲಿನ ಬಾಲಭವನದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸದ ಹಾಗೂ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಪ್ರತಾಪ್ ಸಿಂಹ, ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ಪ್ರಮುಖರಾದ ಎಸ್.ಜಿ. ಮೇದಪ್ಪ, ಮನು ಮುತ್ತಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಪ್ರಮುಖರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಮಾರ್ಚ್ 3 ರಂದು ಕುಶಾಲನಗರದಿಂದ ಸುರತ್ಕಲ್ ತನಕ ಆಯೋಜಿಸಿರುವ ಜನಸುರಕ್ಷಾ ಯಾತ್ರೆಯನ್ನು ಯಶಸ್ವಿಗೊಳಿಸಲು ಎಲ್ಲರೂ ತೊಡಗಿಸಿಕೊಂಡು ಹೆಚ್ಚಿನ ಕಾರ್ಯಕರ್ತರನ್ನು ಜೋಡಿಸುವಂತೆ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಕರೆ ನೀಡಿದರು.

ಆ ಬಳಿಕ ಸಂಘ ಪರಿವಾರದ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರೊಂದಿಗೆ ಈ ಸಂಬಂಧ ಪ್ರತ್ಯೇಕ ಸಭೆ ನಡೆಸಿದ್ದಾಗಿ ಮೂಲಗಳಿಂದ ಗೊತ್ತಾಗಿದೆ.

ಇಂದಿನ ಸಭೆಯಲ್ಲಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಹಾಗೂ ಮಡಿಕೇರಿ ತಾಲೂಕು ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಮೊದಲಾದವರು ಗೈರು ಹಾಜರಾಗಿದ್ದುದು ಎದ್ದು ಕಾಣುತಿತ್ತು.