ಮಡಿಕೇರಿ, ಫೆ. 27: ವೀರಾಜಪೇಟೆಯ ಮಲೆತಿರಿಕೆ ಬೆಟ್ಟ ಪ್ರದೇಶದಲ್ಲಿ ಇಂದು ಹಗಲು ಬಿಸಿಲಿನ ತಾಪದ ನಡುವೆ ಕಾಡ್ಗಿಚ್ಚು ಕಾಣಿಸಿಕೊಂಡು ಎಕರೆಗಟ್ಟಲೆ ಪ್ರದೇಶ ಸುಟ್ಟು ಹೋಗಿದೆ. ಅಲ್ಲಿನ ನಿವಾಸಿಗಳು ತಮ್ಮ ಮನೆಗಳಿಗೆ ಬೆಂಕಿ ಹರಡುವ ಆತಂಕದೊಂದಿಗೆ, ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಸಕಾಲದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದಾವಿಸಿ ಅಲ್ಲಿನ ನಿವಾಸಿಗಳ ನೆರವಿನೊಂದಿಗೆ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.