ಗೋಣಿಕೊಪ್ಪಲು, ಫೆ. 27: ಇಲ್ಲಿನ ಕಾವೇರಿ ಕಾಲೇಜು ವಿಜ್ಞಾನ ವಿಭಾಗದ ವತಿಯಿಂದ ಮಾರ್ಚ್ 1 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮದ್ರಾಸ್ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದ ವಿಜ್ಞಾನಿ ಡಾ. ಇಂದಿರಾ ಕಲ್ಯಾಣ ಸುಂದರಂ ಹಾಗೂ ಕಾವೇರಿ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಕೆ.ಜಿ. ಉತ್ತಪ್ಪ, ಸಂಪನ್ಮೂಲ ವ್ಯಕ್ತಿಯಾಗಿ ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಭಾಗವಹಿಸಲಿದ್ದು, ಕಾವೇರಿ ಕಾಲೇಜು ಪ್ರಾಂಶುಪಾಲರಾದ ಪಟ್ಟಡ ಪೂವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.