ಮಡಿಕೇರಿ, ಮಾ.1 : ಮಂಗಳೂರು ವಿಶ್ವವಿದ್ಯಾನಿಲಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಹೊಸ ಹೆಚ್ಚುವರಿ ತರಗತಿಗಳ ಬ್ಲಾಕ್ ಉದ್ಘಾಟನೆಯು ಮಾರ್ಚ್ 3 ರಂದು ಬೆಳಗ್ಗೆ 11.30 ಗಂಟೆಗೆ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಂಗಳೂರು ವಿವಿಯ ಕುಲಪತಿ ಪ್ರೊ.ಕೆ.ಬೈರಪ್ಪ, ರಿಜಿಸ್ಟ್ರಾರ್ ಪ್ರೊ.ಬಿ.ಎಸ್.ನಾಗೇಂದ್ರ ಪ್ರಕಾಶ್ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲೆ ಡಾ.ಪಾರ್ವತಿ ಅಪ್ಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.