ಸೋಮವಾರಪೇಟೆ, ಫೆ. 28: ತಾಲೂಕಿನ ಬೆಳ್ಳಾರಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮದ ಚಂದ್ರಕಲಾ ಎಂಬವರು ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಳ್ಳಾರಳ್ಳಿಯಲ್ಲಿ ತಮಗೆ ಸೇರಿದ ಜಾಗಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಿಜಯಕುಮಾರ್ ಮತ್ತು ಚನ್ನಬಸವಯ್ಯ ಎಂಬವರು ಕಾನೂನು ಬಾಹಿರ ವರ್ಗಾವಣೆ ಮಾಡಿಸಿಕೊಂಡಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಂದ್ರಕಲಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಎಂ. ಶಿವಣ್ಣ ಅವರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.