*ಗೋಣಿಕೊಪ್ಪಲು, ಫೆ. 28: ಚೆನ್ನಯ್ಯನಕೋಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕರ ಅನುದಾನದ ರೂ. 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಮರು ಡಾಂಬರೀಕರಣಗೊಂಡ ರಸ್ತೆಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ಚೆನ್ನಯ್ಯನಕೋಟೆ ಗ್ರಾ.ಪಂ. ಅಧ್ಯಕ್ಷೆ ಗೀತಾ, ಸದಸ್ಯ ಅರುಣ್, ಬಿ.ಜೆ.ಪಿ. ಸ್ಥಾನೀಯ ಸಮಿತಿ ಅಧ್ಯಕ್ಷ ರತೀಶ್, ತಾ.ಪಂ. ಮಾಜಿ ಸದಸ್ಯ ದಿನೇಶ್, ಗುತ್ತಿಗೆದಾರ ಆರ್ಮುಗ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.