ವೀರಾಜಪೇಟೆ. ಫೆ. 28 : ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕೊಡಗಿನಲ್ಲಿ ಜಾರಿಗೊಂಡ ಅಭಿವೃದ್ಧಿ ಕಾಮಗಾರಿಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಅನುದಾನದ ಮಹತ್ತರ ಪಾತ್ರವಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಹೇಳಿದ್ದಾರೆ. ವೀರಾಜಪೇಟೆ ತಾಲೂಕಿನ ಅಂಬಟ್ಟಿ ಗ್ರಾಮದ ವಿದ್ಯಾನಗರ ಬಡಾವಣೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ನಿಧಿಯ ರೂ. 30 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಿ.ಜೆ.ಪಿ. ಶಾಸಕರು ಜಿಲ್ಲೆಯ ಅಭಿವೃದ್ಧಿಯ ಕಡೆಗೆ ಗಮನ ಹರಿಸದೆ ಬೆಂಕಿ ಹಚ್ಚುವ ಕೆಲಸದಲ್ಲಿ ತೊಡಗಿದ್ದಾರೆ ಎಂದರು.
ಉಸ್ತುವಾರಿ ಸಚಿವರ ಆಪ್ತ ಸಹಾಯಕ ಹರೀಶ್ ಬೋಪಣ್ಣ ಮಾತನಾಡಿ, ಚುನಾವಣೆಗೆ ಮುಂಚಿತವಾಗಿ ಮುಖ್ಯಮಂತ್ರಿಗಳ ಗ್ರಾಮೀಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಗೆ ರೂ. 50 ಕೋಟಿಗಳ ಹೆಚ್ಚುವರಿ ಅನುದಾನಕ್ಕಾಗಿ ಅನುಮತಿ ಕೋರಲಾಗಿದೆ ಎಂದರು. ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ. ಅಬ್ದುಸ್ಸಲಾಂ, ಉಪಾಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ, ಆರ್.ಎಂ.ಸಿ. ಸದಸ್ಯ ಮಾಳೇಟಿರ ಬೋಪಣ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪಿ.ಎ. ಹನೀಫ್, ಜಾಫರ್, ಜಾನ್ಸನ್, ವೀರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಜಿ.ಜಿ. ಮೋಹನ್, ಶರಣು ನಂಜಪ್ಪ ಹಾಜರಿದ್ದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಎಂ.ಎಸ್. ಪೂವಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಟ್ಟಣ ಪಂಚಾಯ್ತಿ ಸದಸ್ಯ ಮುಹಮ್ಮದ್ ರಾಫಿ ಸ್ವಾಗತಿಸಿದರು.