ಮಡಿಕೇರಿ, ಫೆ. 28 : ರಾಜ್ಯದಲ್ಲಿ ನಿರಂತರವಾಗಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಮತ್ತು ಕರ್ನಾಟಕ ಜಂಗಲ್ ರಾಜ್ಯವಾಗಿ ಮಾರ್ಪಟ್ಟಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2013 ರಿಂದ ಇಲ್ಲಿಯವರೆಗೆ ನಡೆದ ಅಪರಾಧ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಬಿಜೆಪಿ ಹಾಗೂ ಹಿಂದೂ ಸಂಘÀಟನೆಗಳ ಸುಮಾರು 27 ಮಂದಿಯ ಹತ್ಯೆಯಾಗಿದ್ದು, ಯಾರಿಗೂ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹಿರಿಯ ಅಧಿಕಾರಿಗಳಿಗೂ ಭದ್ರತೆ ಇಲ್ಲದಾಗಿದ್ದು, 33 ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಐಎಎಸ್ ಅಧಿಕಾರಿಗಳು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದರು.

1.25 ಲಕ್ಷ ಅಪರಾಧ ಪ್ರಕರಣಗಳು ದಾಖಲಾಗಿದ್ದು, 95 ಸಾವಿರ ಪ್ರಕರಣಗಳಿಗೆ ಚಾರ್ಜ್ ಶೀಟ್ ಆಗಿದೆ. ಬಿಜೆಪಿ ಕಾರ್ಯಕರ್ತರಿಗೆ ಧಮಕಿ ಹಾಕಲಾಗುತ್ತಿದ್ದು, ರೌಡಿ ಲಿಸ್ಟ್‍ಗೆ ಸೇರ್ಪಡೆಗೊಳಿಸಿ ಭಯ ಹುಟ್ಟಿಸ ಲಾಗುತ್ತಿದೆ. ಇದಾವುದಕ್ಕೂ ಬಿಜೆಪಿ ಅಂಜುವದಿಲ್ಲವೆಂದು ತಿಳಿಸಿದ ಅಪ್ಪಚ್ಚು ರಂಜನ್ ನಮ್ಮ ಕಾರ್ಯ ಕರ್ತರನ್ನು ನಾವೇ ರಕ್ಷಿಸಿಕೊಳ್ಳಲು ಸಿದ್ಧರಿದ್ದೇವೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಹತ್ಯೆ ಪ್ರಕರಣಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವದಕ್ಕಾಗಿ ಮಾ. 3 ರಂದು ಬೆಳಿಗ್ಗೆ 10.30ಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಜನ ಸುರಕ್ಷತಾ ಜಾಥಾಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಿದ್ದಾರೆ. ಅಂಕೋಲದಲ್ಲು ಅಂದು ಜಾಥಾ ಆರಂಭಗೊಳ್ಳಲಿದ್ದು, ಸಚಿವ ಅನಂತ ಕುಮಾರ್ ಹೆಗಡೆ, ಚಿಕ್ಕಮಗಳೂರಿನಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ, ಸುಳ್ಯದಲ್ಲಿ ಸಂಸದ ನವೀನ್ ಕುಮಾರ್ ಕಟೀಲ್ ಜಾಥಾ ಉದ್ಘಾಟಿಸಲಿದ್ದಾರೆ ಎಂದು ವಿವರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ತುಷ್ಟೀಕರಣ ಮತ್ತು ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ ಎಂದು ಟೀಕಿಸಿದರು.

(ಮೊದಲ ಪುಟದಿಂದ) ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದ್ದು, ಬಿಜೆಪಿಯನ್ನು ಸೈದ್ಧಾಂತಿಕವಾಗಿ ಮುಗಿಸಲು ಹೊರಟಿರುವ ರಾಜ್ಯ ಕಾಂಗ್ರೆಸ್, ಉಸ್ತುವಾರಿ ವೇಣುಗೋಪಾಲ್ ಅವರ ಅಣತಿಯಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಕೊಲೆಯಾದ ಹಿಂದೂ ಕಾರ್ಯಕರ್ತರನ್ನು ಮರಳು ದಂಧೆ ಸೇರಿದಂತೆ ಇನ್ನಿತರ ಪ್ರಕರಣಗಳೊಂದಿಗೆ ಸಂಬಂಧ ಕಲ್ಪಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲು ಕುಟ್ಟಪ್ಪ ಹಾಗೂ ಪ್ರವೀಣ್ ಪೂಜಾರಿ ಅವರ ಹತ್ಯೆಯಾಗಿದ್ದು, ಎಲ್ಲಾ ಪ್ರಕರಣಗÀಳ ವಿರುದ್ಧ ಜನಜಾಗೃತಿ ಮೂಡಿಸುವದಕ್ಕಾಗಿ ಮಾ.3 ರಂದು ಕುಶಾಲನಗರದಿಂದ ಮಡಿಕೆÉೀರಿಗೆ, ಮಡಿಕೇರಿಯಿಂದ ಮಂಗಳೂರಿಗೆ ಜಾಥಾ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಪಂಡ ರವಿಕಾಳಪ್ಪ ಮಾತನಾಡಿ, ಜನ ಸುರಕ್ಷತಾ ಜಾಥಾವು ನಾಲ್ಕು ದಿನಗಳ ಕಾರ್ಯಕ್ರಮವಾಗಿದ್ದು, ಮಾರ್ಚ್ 3 ರಂದು ಬೆಳಗ್ಗೆ 10.30ಕ್ಕೆ ಕುಶಾಲನಗರದಿಂದ ಹೊರಡುವ ಜಾಥಾ ಮಧ್ಯಾಹ್ನ 2 ಗಂಟೆಗೆ ಮಡಿಕೆÉೀರಿ ನಗರ ತಲುಪಲಿದೆ. ನಗರದ ವಿವಿಧ ಮಾರ್ಗಗಳಲ್ಲಿ ತೆರಳುವ ಬಿಜೆಪಿ ಕಾರ್ಯಕರ್ತರು ಗಾಂಧಿ ಮೈದಾನದಲ್ಲಿ ನಡೆಯುವ ಬೃಹತ್ ಸಭೆÉಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಹಾಗೂ ಹಿಂದೂಪರ ಸಂಘÀಟನೆಗಳ ಕಾರ್ಯಕರ್ತರು 10 ಸಾವಿರಕ್ಕು ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಮಾ.4 ರಂದು ಬೆಳಗ್ಗೆ ಮಡಿಕೆÉೀರಿಯಿಂದ ಪೆರಾಜೆಗೆ ತೆರಳುವ ಜಾಥಾವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಳ್ಳಲಿದ್ದಾರೆ. ಮಾ.6 ರಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದು, ಲಕ್ಷಾಂತರ ಕಾರ್ಯಕರ್ತರು ಹಾಜರಿರುವರು ಎಂದು ರವಿಕಾಳಪ್ಪ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ, ಶಾಸಕರಾದ ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸರ್ಕಾರಿ ಕಛೇರಿಗೆ ಪೆಟ್ರೋಲ್ ಸುರಿದ ನಾರಾಯಣ ಸ್ವಾಮಿ ಅವರ ವರ್ತನೆ ಸರ್ಕಾರದ ಕಾರ್ಯವೈಖರಿಗೆ ಸಾಕ್ಷಿಯಾಗಿದೆಯೆಂದು ಟೀಕಿಸಿದರು. ಅಧಿಕಾರಿ ವರ್ಗ ಭಯಭೀತಗೊಂಡಿದ್ದು, ಪೊಲೀಸ್ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ಸಮಾವೇಶದಲ್ಲಿ ಕೆಎಫ್‍ಡಿ ಹಾಗೂ ಪಿಎಫ್‍ಐ ಸಂಘÀಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಲಾಗುವದೆಂದರು.

ಸುದ್ದಿಗೋಷ್ಠಿಯಲ್ಲಿ ಸಾಮಾಜಿಕ ಜಾಲ ತಾಣದ ಜಿಲ್ಲಾ ಸಂಚಾಲಕ ಕಾಳಚಂಡ ಅಪ್ಪಣ್ಣ ಉಪಸ್ಥಿತರಿದ್ದರು.