ಕೂಡಿಗೆ, ಫೆ. 28: ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ನೀರು ಗಂಟಿಗಳಿಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಬೇಕೆಂದು ಸದಸ್ಯರು ಅಧ್ಯಕ್ಷರಿಗೆ ತಿಳಿಸಿದರು.

ಸದಸ್ಯರಾದ ಕೆ.ವೈ. ರವಿ, ರಾಮಚಂದ್ರ, ವಿಶ್ವನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಈ ವ್ಯಾಪ್ತಿಯಲ್ಲಿ ರೋಗ-ರುಜಿನಗಳು ಹೆಚ್ಚಾಗುತ್ತಿದ್ದು, ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು. ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿ, ಸದಸ್ಯರ ಅಭಿಪ್ರಾಯ ಗಳನ್ನು ಪಡೆದು ಹಂತ ಹಂತವಾಗಿ ವಾರ್ಡಿನ ಸಮಸ್ಯೆಯನ್ನು ಪರಿಹರಿ ಸುವದು. ಅಲ್ಲದೆ, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವದು.

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಿವಿಧ ಕಾಮಗಾರಿ ಯನ್ನು ಕೈಗೊಳ್ಳಲಾಗುವದು ಎಂದರು.