ಮಡಿಕೇರಿ, ಮಾ. 1: ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಡಿಕೇರಿ ತಾಲೂಕು ಮಟ್ಟದ ಆಟೋಟ ಸ್ಪರ್ಧೆ ತಾ. 5 ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಆಸಕ್ತರು ಅಂದು ಬೆಳಿಗ್ಗೆ 10 ಗಂಟೆಯಿಂದ ನೋಂದಣಿ ಮಾಡಿಕೊಳ್ಳುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಮಯಂತಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 08272-228197 ಸಂಪರ್ಕಿಸಬಹುದಾಗಿದೆ.