ಸೋಮವಾರಪೇಟೆ, ಫೆ. 28: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಡಲ್ಪಡುವ ಅತ್ಯುತ್ತಮ ಸೇವಾ ಪ್ರತಿನಿಧಿ ಪ್ರಶಸ್ತಿಗೆ ಸೋಮವಾರಪೇಟೆ ಪಟ್ಟಣ ಬಿ ಒಕ್ಕೂಟದ ಸೇವಾಪ್ರತಿನಿಧಿ ಎಂ.ಎ. ರುಬೀನಾ ಪಾತ್ರರಾಗಿದ್ದು, ಸುಳ್ಯದಲ್ಲಿ ನಡೆದ ಮಹಿಳಾ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದಿದ್ದಾರೆ.

ಸುಳ್ಯದಲ್ಲಿ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ಸಮ್ಮಿಲನ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್. ಮಂಜುನಾಥ್ ಅವರು ಪ್ರಶಸ್ತಿ ವಿತರಿಸಿದರು.

ಕಾರ್ಯಕ್ರಮದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಬಾನಂಗಡ ಅರುಣ್, ನಿರ್ದೇಶಕ ಸೀತಾರಾಮ ಶೆಟ್ಟಿ, ಯೋಜನಾಧಿಕಾರಿ ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.