ಕುಶಾಲನಗರ, ಮಾ. 1: ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛ ಕುಶಾಲನಗರ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಹಾಗೂ ಸಂಘ-ಸಂಸ್ಥೆಗಳ ಮೂಲಕ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಯ್ಯಪ್ಪಸ್ವಾಮಿ ದೇವಾಲಯ ರಸ್ತೆಯಲ್ಲಿರುವ ಪಂಚಾಯಿತಿ ಕಚೇರಿ ಬಳಿಯಿಂದ ಜಾಥಾಗೆ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಪರಿಸರ ಅಧಿಕಾರಿ ಹಮೀದ್ ಚಾಲನೆ ನೀಡಿದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಾಥಾ ತೆರಳಿ ಕಸವನ್ನು ಸಂಗ್ರಹಿಸಿ ಬೇರ್ಪಡಿಸುವ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಉಪಾಧ್ಯಕ್ಷ ಟಿ.ಆರ್. ಶರವಣಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಡಿ. ಚಂದ್ರ, ಪಾರ್ವತಿ, ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಸದಸ್ಯರು, ಪೌರಕಾರ್ಮಿಕರು ಇದ್ದರು.