ನಾಪೋಕ್ಲು, ಮಾ. 3: ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವದರ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಸಮೀಪದ ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆ ಯಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯ ಅನುದಾನ ದಲ್ಲಿ ನಿರ್ಮಿಸಲಾದ ನೂತನ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತ ಹೆಣ್ಣುಮಕ್ಕಳು ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಮೊಟಕುಗೊಳಿಸುತ್ತಿ ದ್ದಾರೆ. ಇಂದು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಲಭಿಸಿರುವದರಿಂದ ಕಿಲೋಮೀಟರ್ ಗಳ ಅಂತರದಲ್ಲಿ ಶಾಲಾ ಕಾಲೇಜು ಗಳಿದ್ದು ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಿ ಉತ್ತಮ ಫಲಿತಾಂಶ ತರಲು ಶ್ರಮಿಸಬೇಕು ಎಂದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ವಿಧಾನ ಪರಿಷತ್ ಶಾಸಕ ಎಂ.ಪಿ. ಸುನಿಲ್‍ಸುಬ್ರಮಣಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕಂಡ ಶಶಿಸುಬ್ರಮಣಿ, ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಮನುಮುತ್ತಪ್ಪ, ಜಿಲ್ಲಾಪಂಚಾಯಿತಿ ಸದಸ್ಯ ಮುರಳಿ ಕರುಂಬಮ್ಮಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡ ಶೋಭಾಮೋಹನ್, ಉಪಾಧ್ಯಕ್ಷ ಸಂತುಸುಬ್ರಮಣಿ, ತಾಲೂಕು ಪಂಚಾಯಿತಿ ಸದಸ್ಯೆ ಕೋಡಿಯಂಡ ಇಂದಿರಾಹರೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನೆರೋಟ್ ಆಲಿ, ಶಿವಚಾಳಿಯಂಡ ಅಂಬಿಕಾರ್ಯಪ್ಪ, ಪಾಡಿಯಮ್ಮಂಡ ಮನುಮಹೇಶ್, ಮುಖ್ಯ ಶಿಕ್ಷಕ ಸುಕ್ರುದೇವೇಗೌಡ, ಶಿಕ್ಷಕರಾದ ಅಯ್ಯಪ್ಪ,ಕಿರಣ್,ಮಾರುತಿ ಅರೇರ ಮತ್ತಿತರರು ಪಾಲ್ಗೊಂಡಿದ್ದರು.