ಕುಶಾಲನಗರ, ಮಾ. 3: ನಾಗರಿಕರಿಗೆ ಸಾರ್ವಜನಿಕವಾಗಿ ಕಿರುಕುಳ ನೀಡುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಕುಶಾಲನಗರ ಪಟ್ಟಣ ಪಂಚಾಯಿತಿ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.
ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅಪರಿಚಿತ ಯುವಕನೋರ್ವ ವಿವಸ್ತ್ರವಾಗಿ ಓಡಾಡುತ್ತಿರುವದರೊಂದಿಗೆ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಬಗ್ಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ದೂರು ಬಂದ ಹಿನ್ನೆಲೆಯಲ್ಲಿ ಪಂಚಾಯಿತಿ ಪೌರಕಾರ್ಮಿಕ ಸಿಬ್ಬಂದಿಗಳು ಆತನನ್ನು ಪತ್ತೆ ಹಚ್ಚಿ ಆತನಿಗೆ ಬಟ್ಟೆ ತೊಡಿಸಿ ಉಪಚರಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ ಸಾಗಿಸಿ ನಂತರ ಆತನಿಂದ ದೊರೆತ ವಿಳಾಸದ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕಳುಹಿಸಿಕೊಡಲಾಯಿತು ಎಂದು ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ತಿಳಿಸಿದ್ದಾರೆ.