ಮಡಿಕೇರಿ, ಮಾ. 3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2017-18ನೇ ಸಾಲಿನ ಗೌರಮ್ಮ ದತ್ತಿ ಪುರಸ್ಕಾರ ಪ್ರಶಸ್ತಿಗೆ ಕೊಡಗಿನ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಿ, ಈಗಾಗಲೇ ಚೆಂಬು ಗ್ರಾಮದ ಯುವ ಲೇಖಕಿ ಸಂಗೀತ ರವಿರಾಜ್ ಅವರ ಕಪ್ಪುಹುಡುಗಿ ಕೃತಿಯು ಪ್ರಶಸ್ತಿಗೆ ಆಯ್ಕೆಯಾಗಿದ್ದು, ತಾ. 5 ರಂದು ಮಡಿಕೇರಿಯ ಸರಸ್ವತಿ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯುವ ಗೌರಮ್ಮ ದತ್ತಿ ಕಾರ್ಯಕ್ರಮದಲ್ಲಿ 2017-18ನೇ ಸಾಲಿನ ಗೌರಮ್ಮ ದತ್ತಿ ಪುರಸ್ಕಾರ ಪ್ರಶಸ್ತಿಯನ್ನು ಸಂಗೀತ ರವಿರಾಜ್ ಅವರಿಗೆ ನೀಡಿ ಗೌರವಿಸಲಾಗುವದು ಎಂದು ಕ.ಸಾ.ಪ. ಅಧ್ಯಕ್ಷ ಲೋಕೇಶ್ ಸಾಗರ್ ತಿಳಿಸಿದ್ದಾರೆ. ಇದರೊಂದಿಗೆ 2017-18ನೇ ಸಾಲಿನ ಸಣ್ಣ ಕಥೆಗಳ ಗೌರಮ್ಮ ದತ್ತಿ ಕಾರ್ಯಕ್ರಮದಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆಗಳ ಸ್ಪರ್ಧೆಯನ್ನು ಆಹ್ವಾನಿಸಿ ಈಗಾಗಲೇ ಆಯ್ಕೆಯಾಗಿರುವ ಪ್ರಥಮ ಸ್ಥಾನ ಸಿರಿಗೌರಿ ಜಿ.ಎಲ್, ದ್ವಿತೀಯ ಐಶ್ವರ್ಯ ಎಂ.ಎಲ್ ಹಾಗೂ ತೃತೀಯ ದಿಶಾಂಕ್ ಈ ಮೂವರು ವಿದ್ಯಾರ್ಥಿಗಳಿಗೆ ಸಣ್ಣ ಕಥೆಗಳ ಗೌರಮ್ಮ ದತ್ತಿ ಬಹುಮಾನವನ್ನು ನೀಡಲಾಗುವುದು. ಶ್ರಾವಣಿ ಮತ್ತು ಭವಿಷ್ಯತ್ ಎಂಬ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನವನ್ನು ವಿತರಿಸಲಾಗುವದು.

ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಲೇಖಕಿಯರ ಬಳಗದ ಅಧ್ಯಕ್ಷೆ ಕಸ್ತೂರಿ ಗೋವಿಂದಮ್ಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಾಹಿತಿ ಸ್ಮಿತಾ ಅಮೃತ್‍ರಾಜ್ ಅವರು ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಬೈತಡ್ಕ ಜಾನಕಿ ಬೆಳ್ಯಪ್ಪ, ನಗರದ ಸರಸ್ವತಿ ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕುಮಾರ್, ತಾಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್, ಗೌರವ ಕಾರ್ಯದರ್ಶಿಗಳಾದ ಡಾ. ಕೆ.ಸಿ. ದಯಾನಂದ, ಬಾಳೆಯಡ ಕಿಶನ್ ಪೂವಯ್ಯ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾ. 5ರಂದು ಸಾಹಿತ್ಯ ದಿನ