ಗೋಣಿಕೊಪ್ಪ ವರದಿ, ಫೆ. 2: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಆರೋಪಿಸಿದರು.ಭಾರತೀಯ ಜನತಾ ಪಾರ್ಟಿ ವತಿಯಿಂದ ಕುಟ್ಟದಿಂದ ವೀರಾಜಪೇಟೆವರೆಗೆ ಆಯೋಜಿಸಲಾಗಿದ್ದ ಜನಸುರಕ್ಷಾ ಯಾತ್ರೆಯಲ್ಲಿ ಭಾಗವಹಿಸಿ ಪಟ್ಟಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಕಾರ್ಯಕರ್ತರಿಗೆ, ಜನಸಾಮಾನ್ಯರಿಗೆ ಯಾವದೇ ರಕ್ಷಣೆ ಇಲ್ಲ. ಜನರಿಗೆ ಕಾಂಗ್ರೆಸ್ ಸರ್ಕಾರದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಲು ಯಾತ್ರೆ ನಡೆಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಭಾಗಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುವದು. ಸರ್ಕಾರದ ಭ್ರಷ್ಟತೆÉಯನ್ನು ಜನತೆಗೆ ಮುಟ್ಟಿಸಲಾಗುವದು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಳ್ಳತನ, ಕೊಲೆ, ಅತ್ಯಾಚಾರ ಪ್ರಕರಣಗಳು ಅಧಿಕವಾಗಿದೆ ಎಂದು ಮಡಿಕೇರಿ ಶಾಸಕ

(ಮೊದಲ ಪುಟದಿಂದ) ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಕುಟ್ಟದಿಂದ ಆರಂಭವಾದ ಜನ ಸುರಕ್ಷಾ ಯಾತ್ರೆಯನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.

ಶ್ರೀಮಂಗಲ, ಟಿ. ಶೆಟ್ಟಿಗೇರಿ, ಹುದಿಕೇರಿ, ಪೊನ್ನಂಪೇಟೆ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿತು. ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ ವಾಹನದಲ್ಲಿ ತೆರಳಲಾಯಿತು. ಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರದ ಭೃಷ್ಟತೆ, ದುರಾಡಳಿತ, ಕಾನೂನು ಸುವ್ಯವಸ್ಥೆಯಲ್ಲಿನ ವೈಫಲ್ಯತೆ ನಡೆಯುತ್ತಿದೆ ಎಂಬ ಆರೋಪ ವ್ಯಕ್ತವಾಯಿತು.

ಗೋಣಿಕೊಪ್ಪಲು ಬೈಪಾಸ್ ರಸ್ತೆಯಿಂದ ಉಮಾಮಹೇಶ್ವರಿ ದೇವಸ್ಥಾನದ ವರೆಗೆ ಜಾಥಾ ನಡೆಯಿತು. ಯಾತ್ರೆಯಲ್ಲಿ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.

ಯಾತ್ರೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷ ಸುಜಾ ಕುಶಾಲಪ್ಪ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಯಮುನಾ ಚೆಂಗಪ್ಪ, ತಾಲೂಕು ಅಧ್ಯಕ್ಷ ಅರುಣ್ ಭೀಮಯ್ಯ, ತಾ.ಪಂ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷೆ ಸೆಲ್ವಿ, ಪ್ರಮುಖರುಗಳಾದ ನೆಲ್ಲೀರ ಚಲನ್, ಸುಮಿ ಸುಬ್ಬಯ್ಯ, ಗಿರೀಶ್ ಗಣಪತಿ, ಕಿಲನ್ ಗಣಪತಿ ಉಪಸ್ಥಿತರಿದ್ದರು.