ಮಡಿಕೇರಿ, ಮಾ. 5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಅಯ್ಯಂಗೇರಿಯ ಗೊಲ್ಲ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆಯಿತು.
ಮಡಿಕೇರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ವಿ. ಕವಿತಾ ಮಾತನಾಡಿ, ಅಲೆಮಾರಿ ಜನಾಂಗವಾದ ಗೊಲ್ಲ ಜನಾಂಗದವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಸರ್ಕಾರದ ಸೌಲಭ್ಯಗಳ ಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗಮಂಡಲದ ಕಾವೇರಿ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಕೆ.ಜೆ. ದಿವಾಕರ ಮಾತನಾಡಿದರು. ಅಯ್ಯಂಗೇರಿ ಗ್ರಾ.ಪಂ. ಸದಸ್ಯ ಕೋಡಿಯಂಡ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಗೊಲ್ಲ ಸಮಾಜದ ಅಧ್ಯಕ್ಷ ಹಾಗೂ ಗ್ರಾ.ಪಂ. ಮಾಜಿ ಅಧ್ಯಕ್ಷ ಆಚೀರ ನಾಣಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ವಸತಿ ನಿಲಯದ ಮೇಲ್ವಿಚಾರಕರಾದ ಪಾಂಡಿ ಎಂ. ಭರತ್, ಸುಶ್ಮಾ, ಜೀವನ್‍ಕುಮಾರ್, ಈಶ್ವರ್, ಚಿನ್ನತಪ್ಪ ದೇವಸ್ಥಾನದ ಅರ್ಚಕ ಗಣಪತಿ ಮತ್ತು ಇತರರು ಪಾಲ್ಗೊಂಡಿದ್ದರು.